ಬಳ್ಳಾರಿ: ವೈದ್ಯಕೀಯ ವಿದ್ಯಾರ್ಥಿಯೋರ್ವ ಹಾಸ್ಟೆಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬಳ್ಳಾರಿಯ ವಿಮ್ಸ್ ನಲ್ಲಿ ನಡೆದಿದೆ.
ಶ್ರೇಯಸ್ ಜೋಶಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಶ್ರೇಯಸ್ ಹಾಸ್ಟೆಲ್ ನ ತನ್ನ ರೂಮಿನಲ್ಲಿಯೇ ನೇಣು ಬಿಗಿದುಕೊಂಡಿದ್ದಾನೆ. ತಕ್ಷಣ ಆತನ ಸ್ನೇಹಿತರು ವಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾನೆ.
ಶ್ರೇಯಸ್ ಬೈಪೋಲಾರ್ ಡಿಸಾರ್ಡರ್ ಕಾಯಿಲೆಯಿಂದ ಬಳಲುತ್ತಿದ್ದ. ನೇಣಿಗೆ ಶರಣಾಗುವ ಮೊದಲು ಶ್ರೇಯಸ್ ತನ್ನ ಅಕ್ಕ ಶ್ರದ್ಧಾಗೆ ಫೋನ್ ನಲ್ಲಿ ಮಾತನಾಡಿದ್ದ ಎಂದು ತಿಳಿದುಬಂದಿದೆ.