ಬೆಂಗಳೂರು: ವಿಧಾನಸೌಧ ವ್ಯಾಪಾರ ಸೌಧ ಮಾಡಿದ್ದೇ ಬಿಜೆಪಿ ಸಾಧನೆ ಎಂಬ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಪ್ರಿಯಾಂಕ ಖರ್ಗೆ ಏನು ಎಂದು ನಾನು ಹೇಳಬೇಕಿಲ್ಲ ಎಂದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ. ನಾವು ಹೇಗೆ ಆಡಳಿತ ನಡೆಸಬೇಕು ಎಂಬುದನ್ನು ಕಾಂಗ್ರೆಸ್ ನವರಿಂದ ಕಲಿಯಬೇಕಿಲ್ಲ. ಇನ್ನು ಪ್ರಿಯಾಂಕ್ ಖರ್ಗೆ ಏನೆಂದು ನಾನು ಹೇಳಬೇಕಿಲ್ಲ. ಅವರು ಹಲವು ದಶಕಗಳಿಂದ ಕಾಂಗ್ರೆಸ್ ನಲ್ಲಿಯೇ ಇದ್ದವರು. ಕಾಂಗ್ರೆಸ್ ಪಕ್ಷ ಏನೆಂಬುದು ಇಡೀ ನಾಡಿನ ಜನತೆಗೆ ಗೊತ್ತಿದೆ ಎಂದು ಹೇಳಿದ್ದಾರೆ.
BIG BREAKING: ಸಂಜೆ 4 ಗಂಟೆಗೆ ಸಿಎಂ ಬೊಮ್ಮಾಯಿ ಮಹತ್ವದ ಸುದ್ದಿಗೋಷ್ಠಿ; ಹೆಚ್ಚಿದ ಕುತೂಹಲ
ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಯಾರ ಬಳಿ ಯಾವುದೇ ದಾಖಲೆಗಳಿದ್ದರೂ ಸಿಐಡಿಗೆ ಕೊಡಿ. ಅವುಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಾರೆ. ಪ್ರಕರಣದ ಬಗ್ಗೆ ಹೇಳಿಕೆ ನೀಡಿದವರೇ ಜವಾಬ್ದಾರರು. ಸಿಐಡಿ ಅಧಿಕಾರಿಗಳು ಸಮರ್ಪಕವಾಗಿ ಪ್ರಕರಣದ ತನಿಖೆ ನಡೆಸಿದ್ದಾರೆ ಎಂದು ತಿಳಿಸಿದರು.