ಹೃದಯದ ಆರೋಗ್ಯಕ್ಕೆ ಅತ್ಯುತ್ತಮ ಕಬ್ಬಿನ ಹಾಲು

ಭಾರತ ಅತಿ ಹೆಚ್ಚು ಕಬ್ಬು ಬೆಳೆಯುವ ದೇಶ. ಸಕ್ಕರೆ ಹಾಗೂ ಬೆಲ್ಲದ ತಯಾರಿಕೆ ಅದರ ಹಿಂದಿರುವ ಉದ್ದೇಶ. ಕಬ್ಬಿನ ಹಾಲಿನಲ್ಲಿ ಕಾರ್ಬೋಹೈಡ್ರೇಟುಗಳು, ಪ್ರೋಟಿನ್, ಗಂಧಕ, ಕ್ಯಾಲ್ಸಿಯಂ, ಕಬ್ಬಿಣ, ಸತು ಮತ್ತು ಪೊಟ್ಯಾಶಿಯಂನಂತಹ ಖನಿಜಗಳ ಸಹಿತ ಹಲವಾರು ಅವಶ್ಯಕ ಪೋಷಕಾಂಶಗಳಿವೆ.

ಸಕ್ಕರೆ ಬೆರೆಸಿದ ಇತರ ಪಾನೀಯಗಳ ಸೇವನೆಯಿಂದ ಕಬ್ಬಿನ ಹಾಲು ಕುಡಿಯುವುದು ಅತ್ಯುತ್ತಮ. ಇದರಲ್ಲಿರುವ ನೈಸರ್ಗಿಕ ಸಿಹಿಯೇ ಹಲವರಿಗೆ ಪ್ರಿಯವಾಗುತ್ತದೆ.

ಕಬ್ಬಿನ ಹಾಲಿನ ಸೇವನೆಯಿಂದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಥವಾ ಎಲ್ಡಿಎಲ್ ಪ್ರಮಾಣ ಕಡಿಮೆಯಾಗುತ್ತದೆ. ಇದು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಕಬ್ಬಿನ ಜಲ್ಲೆಯನ್ನು ಜಗಿದು ರಸ ಹೀರುವ ಮೂಲಕ ಹಲ್ಲು ಮತ್ತು ಒಸಡುಗಳು ಗಟ್ಟಿಗೊಳ್ಳುತ್ತವೆ.

ಬಿಳಿರಕ್ತಕಣಗಳನ್ನು ಹೆಚ್ಚಿಸುವ ಇದರ ವಿಶೇಷ ಗುಣದಿಂದ ಮುಖದ ಮೊಡವೆಗಳು ಮಾಯವಾಗುತ್ತದೆ. ಬಾಯಿಯ ದುರ್ವಾಸನೆಯೂ ದೂರವಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read