ಬೆಂಗಳೂರು: ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ನ್ಯಾಯಮೂರ್ತಿ ಭಕ್ತವತ್ಸಲ ಅವರ ಅಧ್ಯಕ್ಷತೆಯಲ್ಲಿ ಪ್ರತ್ಯೇಕ ಆಯೋಗ ರಚನೆ ಮಾಡಿದೆ.
ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್. ಚಿಕ್ಕಮಠ ಈ ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಹಿಂದುಳಿದ ವರ್ಗಗಳಿಗೆ ಪಂಚಾಯತ್ ರಾಜ್ ಸಂಸ್ಥೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಾತಿನಿಧ್ಯ ಕಲ್ಪಿಸುವ ಕುರಿತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಸೂಚನೆಯಂತೆ ಈ ಆಯೋಗ ರಚಿಸಲಾಗಿದೆ ಎಂದು ತಿಳಿದುಬಂದಿದೆ.