ಹರಿಯಾಣದ ಕರ್ನಾಲ್ ನಲ್ಲಿ ಬಂಧಿತ ಉಗ್ರರು ಮುಂಬೈ ರೈಲುಗಳಲ್ಲಿ ಸರಣಿ ಸ್ಫೋಟಕ್ಕೆ ಯೋಜನೆ ರೂಪಿಸಿದ್ದರು ಎಂಬ ಮಾಹಿತಿ ಗೊತ್ತಾಗಿದೆ.
ಬಂಧಿತರಾಗಿರುವ ನಾಲ್ವರು ಭಯೋತ್ಪಾದಕರು ಮುಂಬೈನಲ್ಲಿ ಸ್ಥಳೀಯ ಮತ್ತು ಪ್ರಯಾಣಿಕ ರೈಲುಗಳನ್ನು ಗುರಿಯಾಗಿಸಲು ಸಂಚು ರೂಪಿಸುತ್ತಿದ್ದರು ಎಂದು ಅವರು ವಿಚಾರಣೆಯ ವೇಳೆ ಬಹಿರಂಗಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸ್ಫೋಟಕಗಳನ್ನು ತಲುಪಿಸಲು ತೆಲಂಗಾಣಕ್ಕೆ ತೆರಳುತ್ತಿದ್ದ ಪಾಕಿಸ್ತಾನದ ನಾಲ್ವರು ಶಂಕಿತ ಭಯೋತ್ಪಾದಕರನ್ನು ಗುರುವಾರ ಕರ್ನಾಲ್ ನಲ್ಲಿ ಬಂಧಿಸಲಾಗಿದ್ದು, ಅವರು ಪ್ರಯಾಣಿಸುತ್ತಿದ್ದ ವಾಹನದಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಐಇಡಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅವರು ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿರುವ ಪಾಕಿಸ್ತಾನ ಮೂಲದ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದರು. ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ತಲುಪಿಸಲು ಆ್ಯಪ್ ಮೂಲಕ ಸ್ಥಳಗಳನ್ನು ಕಳುಹಿಸುತ್ತಿದ್ದರು ಎಂದು ಕರ್ನಾಲ್ನ ಪೊಲೀಸ್ ವರಿಷ್ಠಾಧಿಕಾರಿ ಗಂಗಾರಾಮ್ ಪುನಿಯಾ ಕರ್ನಾಲ್ ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.