ಮಂಡ್ಯ: ಜೆಡಿಎಸ್ ವಿರುದ್ಧ ಎಂ ಎಲ್ ಸಿ ಮರಿತಿಬ್ಬೇಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಜೆಡಿಎಸ್ ನಲ್ಲಿ ಹಣವಿದ್ದವರಿಗೆ ಮಾತ್ರ ಟಿಕೆಟ್ ಸಿಗುತ್ತದೆ. ನಾಯಕರ ಬಗ್ಗೆ ನನಗೆ ಬಹಳ ಬೇಸರವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಣವಿಲ್ಲದವರಿಗೆ ಜೆಡಿಎಸ್ ನಿಂದ ಚುನಾವಣೆಗೆ ಸ್ಪರ್ಧಿಸುವ ಅವಕಾಶವಿಲ್ಲ. ಇದನ್ನು ಕಳೆದ 4-6 ವರ್ಷಗಳಿಂದ ಅನುಭವಿಸಿಕೊಂಡು ಬಂದಿದ್ದೇನೆ. ಪಕ್ಷ ಸಂಘಟನೆ, ಕಾರ್ಯಕರ್ತರ ಬಗ್ಗೆ ಜೆಡಿಎಸ್ ನಾಯಕರಿಗೆ ಯಾವುದೇ ಕಾಳಜಿಯಿಲ್ಲ. ದಕ್ಷಿಣ ಪದವೀಧರ ಕ್ಷೇತ್ರದ ಟಿಕೆಟ್ ಬಗ್ಗೆ ಕೆಟ್ಟ ನಿರ್ಧಾರ ಮಾಡಿದರು. ಇಂತ ನಿರ್ಧಾರ ಮಾಡುತ್ತಾರೆ ಎಂದು ನಿರೀಕ್ಷಿಸಿಯೂ ಇರಲಿಲ್ಲ. ಜಯರಾಂ ಬಳಿ ಹಣವಿಲ್ಲ ಎಂದು ಟಿಕೆಟ್ ಬೇಡ ಅಂದ್ರು. ಹಣವಿದೆ ಎಂಬ ಕಾರಣಕ್ಕೆ ರಾಮುಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದ್ದಾರೆ.
ರಾಮು ಒಂದು ದಿನವೂ ಜೆಡಿಎಸ್ ಪಕ್ಷಕ್ಕಾಗಿ ದುಡಿದವನಲ್ಲ. ಜೆಡಿಎಸ್ ನಾಯಕರ ಈ ನಿರ್ಧಾರವನ್ನು ನಾನು ಬೆಂಬಲಿಸಲ್ಲ. ಜೆಡಿಎಸ್ ಅಭ್ಯರ್ಥಿ ಪರ ನಾನು ವೋಟ್ ಕೇಳುವುದೂ ಇಲ್ಲ. ಯಾರ ಆಯ್ಕೆ ಅಂತ ನೋಟಿಫಿಕೇಷನ್ ಬಳಿಕ ತೀರ್ಮಾನ ಮಾಡುತ್ತೇನೆ ಎಂದು ಅಸಮಾಧಾನ ಹೊರಹಾಕಿದ್ದಾರೆ.