ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮತ್ತೊಬ್ಬ ಚುನಾಯಿತ ಪ್ರತಿನಿಧಿಯನ್ನು ಬಂಧಿಸಲಾಗಿದೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪುರಸಭೆ ಸದಸ್ಯ ಶಶಿ ಬಂಧಿತ ಆರೋಪಿ ಎನ್ನಲಾಗಿದೆ. ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪದ ಶಶಿಯನ್ನು ಮೇಲೆ ಬಂಧಿಸಲಾಗಿದೆ. ಪ್ರಭಾವಿಗಳು ಮತ್ತು ಪೊಲೀಸ್ ಅಧಿಕಾರಿಗಳ ಜೊತೆಗೆ ಸೇರಿ ಡೀಲ್ ಕುದುರಿಸಿದ್ದ ಆರೋಪದಲ್ಲಿ ಬಂಧಿಸಲಾಗಿದೆ. ವೆಂಕಟೇಶ್ ಅವರ ಆಯ್ಕೆಗೆ ಡೀಲ್ ಮಾಡಿಸಿದ ಆರೋಪದಲ್ಲಿ ಸಿಐಡಿ ಅಧಿಕಾರಿಗಳು ಶಶಿಯನ್ನು ಬಂಧಿಸಿದ್ದಾರೆ.
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬೆಕ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವಮೂರ್ತಿಯನ್ನು ಈ ಮೊದಲೇ ಬಂಧಿಸಲಾಗಿತ್ತು. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಂದ್ರೇಗೌಡರ ಪುತ್ರ ವೆಂಕಟೇಶನಿಗೆ ಪಿಎಸ್ಐ ಕೆಲಸ ಕೊಡಿಸಲು ಡೀಲ್ ಕುದುರಿಸಿದ್ದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. ಇದರ ಮುಂದುವರೆದ ಭಾಗವಾಗಿ ಶಶಿ ಅವರನ್ನು ಬಂಧಿಸಲಾಗಿದೆ.