ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ 2,288 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 10 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524103 ಕ್ಕೆ ಏರಿಕೆಯಾಗಿದೆ.
11 ವರ್ಷದ ಕ್ಯಾನ್ಸರ್ ಪೀಡಿತ ಬಾಲಕನ ಭಾವಪರವಶದ ಕಣ್ಣೀರಿಗೆ ಕಾರಣ ಏನು ಗೊತ್ತಾ..?
ಇನ್ನು ದೇಶದಲ್ಲಿ 19637 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 3044 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42563949 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
ನಿನ್ನೆ 13,90,912 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,90,50,86,706 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,84,843 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.