ನವದೆಹಲಿ: ರಾಜ್ಯವನ್ನು ಸುತ್ತಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೆ ಸಿದ್ಧವಾಗಿದ್ದೇವೆ. ಅದೇ ರೀತಿ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವಲಯವಾರು ಸಭೆ ನಡೆಸಿ ಚುನಾವಣೆಗೆ ಸಿದ್ಧರಾಗಿದ್ದೇವೆ. ಸುಪ್ರೀಂಕೋರ್ಟ್ ಆದೇಶವನ್ನು ಸ್ಟಡಿ ಮಾಡಬೇಕು. ಸ್ಟಡಿ ಮಾಡುವಂತೆ ರಾಜ್ಯದ ಕಾನೂನು ತಂಡಕ್ಕೆ ಹೇಳಿದ್ದೇನೆ. ರಾಜ್ಯ ಚುನಾವಣಾ ಆಯೋಗ ಏನು ತೀರ್ಮಾನಿಸುತ್ತದೆ ಎಂಬುದನ್ನು ನೋಡಬೇಕು. ಚುನಾವಣೆಗೆ ಬಿಜೆಪಿ ಸಿದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.