
ಬೆಂಗಳೂರು: ಮೇ 13 ರಿಂದ ಕಂದಾಯ ಇಲಾಖೆಯ ‘ಹಲೋ ಕಂದಾಯ ಸಚಿವರೇ’ ಸಹಾಯವಾಣಿ ಆರಂಭವಾಗಲಿದೆ. ಸಹಾಯವಾಣಿಗೆ ಕರೆ ಮಾಡಿದ 72 ಗಂಟೆಯೊಳಗೆ ಅರ್ಹ ಫಲಾನುಭವಿಗಳಿಗೆ ವಿಧವಾ ವೇತನ, ಸಂಧ್ಯಾ ಸುರಕ್ಷಾ ಸೇರಿದಂತೆ ಸರ್ಕಾರದ ವಿವಿಧ ಪಿಂಚಣಿ ಯೋಜನೆಗಳು ಜಾರಿಯಾಗಲಿವೆ.
ಕಂದಾಯ ಸಚಿವ ಆರ್. ಅಶೋಕ್ ವಿಧಾನಸೌಧದಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಪಿಂಚಣಿ ಯೋಜನೆಯನ್ನು ಸಂಪೂರ್ಣವಾಗಿ ಪೇಪರ್ ಲೆಸ್ ಮಾಡಲಾಗುತ್ತಿದೆ. ಸರ್ಕಾರದ ವಿವಿಧ ಪಿಂಚಣಿ ಯೋಜನೆಗಳಿಗೆ ಯಾವುದೇ ಫಲಾನುಭವಿಗಳು ಅರ್ಹರಾಗುತ್ತಿದ್ದಂತೆ ಕಂದಾಯ ಇಲಾಖೆ ಅಧಿಕಾರಿಗಳು ಅವರ ಮನೆ ಬಾಗಿಲಿಗೆ ಹೋಗಿ ಯೋಜನೆಗೆ ಅರ್ಜಿ ಪಡೆದು ಜಾರಿಗೊಳಿಸಲಾಗುತ್ತಿದೆ ಎಂದರು.
ಮೇ 13 ರಿಂದ ‘ಹಲೋ ಕಂದಾಯ ಸಚಿವರೇ’ ಸಹಾಯವಾಣಿ ಆರಂಭವಾಗಲಿದ್ದು, ಕರೆ ಮಾಡಿದ 72 ಗಂಟೆಯೊಳಗೆ ಅರ್ಹ ಫಲಾನುಭವಿಗಳಿಗೆ ವಿವಿಧ ಪಿಂಚಣಿ ಯೋಜನೆಗಳು ಜಾರಿ ಆಗುತ್ತವೆ ಎಂದು ತಿಳಿಸಿದ್ದಾರೆ.