ಶಿವಮೊಗ್ಗ: ಗೃಹಸಚಿವರ ತವರು ಕ್ಷೇತ್ರ ತೀರ್ಥಹಳ್ಳಿಯಲ್ಲಿ ಅಮಾನುಷ ಘಟನೆ ನಡೆದಿದೆ. ದಲಿತ ಮಹಿಳೆಯನ್ನು ಬೆತ್ತಲೆಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಿನ್ನೆ ಅತ್ಯಾಚಾರಕ್ಕೆ ಯತ್ನಿಸಿ ಜೀವಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದ್ದು, ಮಹಿಳೆ ತೀರ್ಥಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಗೃಹ ಸಚಿವರಾದ ಆರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.