ಕೇಂದ್ರ ಚುನಾವಣಾ ಆಯೋಗದ ನೂತನ ಮುಖ್ಯಸ್ಥರಾಗಿ ರಾಜೀವ್ ಕುಮಾರ್ ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್, ರಾಜೀವ್ ಕುಮಾರ್ ನೇಮಕದ ಕುರಿತಂತೆ ಆದೇಶ ಹೊರಡಿಸಿದ್ದಾರೆ.
ರಾಜೀವ್ ಕುಮಾರ್ ಮೇ 15 ರಂದು ಚುನಾವಣಾ ಆಯೋಗದ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಲಿದ್ದು, ಸುಶೀಲ್ ಚಂದ್ರ ಅಧಿಕಾರಾವಧಿ ಮೇ 14 ರಂದು ಪೂರ್ಣಗೊಳ್ಳಲಿದೆ.
ಸಂವಿಧಾನದ ಆರ್ಟಿಕಲ್ 324 ಕ್ಲೌಸ್ (2) ಅನ್ವಯ ತಮ್ಮ ಅಧಿಕಾರವನ್ನು ಬಳಸಿ ರಾಷ್ಟ್ರಪತಿಗಳು ಇಂದು ಆದೇಶ ಹೊರಡಿಸಿದ್ದಾರೆ. ಬಳಿಕ ಕಾನೂನು ಸಚಿವಾಲಯದಿಂದ ಅಧಿಕೃತ ಪ್ರಕಟಣೆ ಹೊರ ಬಿದ್ದಿದ್ದು, ಕೇಂದ್ರ ಸಚಿವ ಕಿರಣ್ ರಿಜಿಜು ಟ್ವೀಟರ್ ನಲ್ಲಿ ಇದನ್ನು ಹಂಚಿಕೊಂಡಿದ್ದಾರೆ.