ಬೆಂಗಳೂರು: ದೌರ್ಜನ್ಯದಿಂದ ಮೃತಪಟ್ಟ ಪರಿಶಿಷ್ಟ ಜಾತಿ ಮತ್ತು ಪಂಗಡ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರರ ರೀತಿ ಅನುಕಂಪ ಆಧಾರಿತ ಉದ್ಯೋಗ ನೀಡುವ ಬಗ್ಗೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರ ರೀತಿ ಎಸ್ಸಿ,ಎಸ್ಟಿ ವ್ಯಕ್ತಿಯ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ನೀಡಲು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರಿ ನೌಕರರು ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿ ಮೃತಪಟ್ಟಾಗ ಅವರ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರಿತ ಸರ್ಕಾರಿ ಕೆಲಸ ನೀಡಲಾಗುತ್ತದೆ. ಅದೇ ಮಾದರಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವ್ಯಕ್ತಿಗಳು ದೌರ್ಜನ್ಯದಿಂದ ಮೃತಪಟ್ಟರೆ ಆ ವ್ಯಕ್ತಿಯ ಅವಲಂಬಿತರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಕೆಲಸ ನೀಡಲಾಗುವುದು ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆ.ಸಿ. ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.