ಬೆಂಗಳೂರು: ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತರ ಮಾಸಾಶನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಹಲೋ ಕಂದಾಯ ಸಚಿವರೇ ಹೆಲ್ಪ್ ಲೈನ್ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸರ್ಕಾರದಿಂದ 72 ಗಂಟೆಗಳಲ್ಲಿ ಮನೆ ಬಾಗಿಲಿಗೆ ಪಿಂಚಣಿ ಸೇವೆ ಸೌಲಭ್ಯ ಒದಗಿಸಲಾಗುವುದು ಎಂದರು.
ಇದೇ ವೇಳೆ ಆಸಿಡ್ ದಾಳಿಗೊಳಗಾದ ಸಂತ್ರಸ್ತರ ಸಹಾಯಧನ ಹೆಚ್ಚಿಸಲಾಗಿದ್ದು, ಮಾಸಾಶನ 3ರಿಂದ 10 ಸಾವಿರಕ್ಕೆ ಏರಿಕೆ ಮಾಡಲಾಗಿದೆ ಎಂದು ಘೋಷಿಸಿದರು. ಈ ಮೂಲಕ ಇನ್ಮುಂದೆ ಆಸಿಡ್ ಸಂತ್ರಸ್ತರಿಗೆ ಪ್ರತಿ ತಿಂಗಳು 10,000 ರೂಪಾಯಿ ಸಹಾಯಧನ ಸಿಗಲಿದೆ.