24 ವರ್ಷಗಳ ದಾಂಪತ್ಯಕ್ಕೆ ಸಲ್ಮಾನ್ ಖಾನ್ ಸಹೋದರ ಸೋಹೈಲ್ ಖಾನ್ ಮತ್ತು ಸೀಮಾ ಖಾನ್ ಅಂತ್ಯ ಹಾಡಿದ್ದು, ವಿಚ್ಛೇದನಕ್ಕೆ ಮುಂದಾಗಿದ್ದಾರೆ.
ನಟ, ನಿರ್ಮಾಪಕ ಸೋಹೈಲ್ ಖಾನ್ ಮತ್ತು ಸೀಮಾ ಖಾನ್ 1998 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕಳೆದ ಕೆಲವು ಸಮಯದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದ ಇಬ್ಬರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅವರು ಮೇ 13 ರಂದು ಮುಂಬೈನ ಕೌಟುಂಬಿಕ ನ್ಯಾಯಾಲಯದ ಬಳಿ ಕಾಣಿಸಿಕೊಂಡಿದ್ದಾರೆ.
ಸೊಹೈಲ್ ಮತ್ತು ಸೀಮಾ ಇಬ್ಬರೂ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಮುಂಬೈನ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಇಬ್ಬರೂ ತಮ್ಮ ನಿರ್ಧಾರವನ್ನು ಖಾಸಗಿಯಾಗಿ ಇರಿಸಿಕೊಳ್ಳಲು ಮತ್ತು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಲು ನಿರ್ಧರಿಸಿದ್ರು. ಅವರು ಕಳೆದ ಕೆಲವು ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ.
ಈ ಬಗ್ಗೆ ಸೀಮಾ ಖಾನ್, ತಾವಿಬ್ಬರೂ ತಮ್ಮ ಸಂಬಂಧವನ್ನು ಮುಂದುವರೆಸಿಕೊಂಡು ಹೋಗುತ್ತಿಲ್ಲ ಎಂಬುದಾಗಿ ಹೇಳಿದ್ದಾರೆ. ಸೋಹೈಲ್ ಮತ್ತು ಸೀಮಾ ದಂಪತಿ ಇಬ್ಬರು ಗಂಡು ಮಕ್ಕಳನ್ನು ಹೊಂದಿದ್ದಾರೆ.