‘ಆಧಾರ್’ ಇಂದು ಸರ್ಕಾರಿ ಸೇವೆಗಳು ಸೇರಿದಂತೆ ಬಹುತೇಕ ಸೇವೆಗಳಿಗೆ ಕಡ್ಡಾಯವಾಗಿದೆ. ಪಾನ್ ಕಾರ್ಡ್, ಬ್ಯಾಂಕ್ ಖಾತೆ ಸೇರಿದಂತೆ ಹಲವು ಸೇವೆಗಳಿಗೆ ಆಧಾರ್ ಜೋಡಣೆ ಮಾಡುವುದು ಕಡ್ಡಾಯವಾಗಿದೆ.
ಇದೀಗ ಆಧಾರ್ ಜೋಡಣೆ ಕುರಿತಂತೆ ಮತ್ತೊಂದು ಮಹತ್ವದ ತೀರ್ಮಾನ ಕೈಗೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಮತದಾರರ ಗುರುತಿನ ಚೀಟಿ ಜೊತೆ ಆಧಾರ್ ಜೋಡಣೆ ಮಾಡಲು ನಿರ್ಧರಿಸಲಾಗಿದೆ.
ಕೇಂದ್ರ ಚುನಾವಣಾ ಆಯೋಗದ ಆಯುಕ್ತ ಸುಶೀಲ್ ಚಂದ್ರ ಈ ಮಾಹಿತಿಯನ್ನು ನೀಡಿದ್ದು, ಶೀಘ್ರದಲ್ಲಿಯೇ ಸರ್ಕಾರ ಈ ಕುರಿತು ನಿಯಮಗಳನ್ನು ಪ್ರಕಟಿಸಲಿದೆ ಎಂದು ಹೇಳಿದ್ದಾರೆ.
ಆದರೆ ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡುವುದು ಮತದಾರರ ವಿವೇಚನೆಗೆ ಬಿಟ್ಟಿದ್ದು, ಒಂದೊಮ್ಮೆ ಜೋಡಣೆ ಮಾಡಲು ನಿರಾಕರಿಸಿದರೆ ಅದಕ್ಕೆ ಸೂಕ್ತ ಕಾರಣಗಳನ್ನು ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.