ಮಂಡ್ಯ: ಮೈ ಶುಗರ್ ಕಾರ್ಖಾನೆ ಸ್ವಚ್ಛಗೊಳಿಸಲು ಮುಂದಾದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದು, ಮಂಡ್ಯದ ಕಾರ್ಖಾನೆ ಮುಂದೆ ಹೈಡ್ರಾಮಾ ನಡೆದಿದೆ.
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್, ನೇತೃತ್ವದಲ್ಲಿ ಕಾರ್ಖಾನೆ ಸ್ವಚ್ಛತೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಿದ್ದಾರೆ. ಈ ವೇಳೆ ಕಾರ್ಖಾನೆ ಪ್ರವೇಶಕ್ಕೆ ಗೇಟ್ ತೆರೆಯಲು ಮುಂದಾಗುತ್ತಿದ್ದಂತೆ ಅವಕಾಶ ನೀಡದ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ತಡೆದಿದ್ದಾರೆ.
ಫ್ಯಾಕ್ಟರಿ ಎದುರು ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಕಾರ್ಖಾನೆ ಎದುರೇ ಕಾಂಗ್ರೆಸ್ ಕಾರ್ಯಕರ್ತರು ಧರಣಿ ಕುಳಿತುಕೊಳ್ಳಲು ಮುಂದಾಗಿದ್ದಾರೆ. ಅಲ್ಲದೇ ಕಾರ್ಖಾನೆ ಪ್ರವೇಶಕ್ಕೆ ಅನುಮತಿ ನೀಡಿದ್ದರೂ ಪೊಲೀಸರು ಬಿಡುತ್ತಿಲ್ಲ ಎಂದು ಮೊಹಮ್ಮದ್ ನಲಪಾಡ್ ಆರೋಪಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ನಲಪಾಡ್ ಸೇರಿದಂತೆ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.