ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಶಾಲೆಗಳನ್ನು ಆರಂಭವಾಗಲಿವೆ. ಸಾಮಾನ್ಯವಾಗಿ ಜೂನ್ ನಿಂದ ಶಾಲೆಗಳು ಆರಂಭವಾಗಲಿದ್ದು, ಕೊರೋನಾ ಕಾರಣದಿಂದ ಮಕ್ಕಳಿಗೆ ಕಲಿಕಾ ಚೇತರಿಕೆ ಕಾರ್ಯಕ್ರಮ ಕೈಗೊಳ್ಳಲು ಈ ಬಾರಿ 15 ದಿನ ಮೊದಲೇ 1 ರಿಂದ 10 ನೇ ತರಗತಿ ಶಾಲೆಗಳನ್ನು ಆರಂಭಿಸಲಾಗುತ್ತದೆ.
ಭಾನುವಾರ ರಜಾ ದಿನವಾಗಿದ್ದರೂ ಕೂಡ ಶಿಕ್ಷಕರು ಸಿಬ್ಬಂದಿ ಶಾಲೆಗಳನ್ನು ಸ್ವಚ್ಛಗೊಳಿಸಿ ಸಿದ್ಧಪಡಿಸಿದ್ದಾರೆ. ಎಸ್ಡಿಎಂಸಿ ಸದಸ್ಯರು, ಹಳೆವಿದ್ಯಾರ್ಥಿಗಳು, ಸ್ಥಳೀಯರ ನೆರವಿನೊಂದಿಗೆ ಶಾಲೆಯನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳಿಂದ ಸಿಂಗರಿಸಿ ಮಕ್ಕಳನ್ನು ಸ್ವಾಗತಿಸಲು ಸಿದ್ಧತೆ ಕೈಗೊಳ್ಳಲಾಗಿದೆ.
ತುಮಕೂರಿನ ಎಂಪ್ರೆಸ್ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದರೊಂದಿಗೆ 2022 -23ನೇ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮೊದಲಾದವರು ಭಾಗಿಯಾಗಲಿದ್ದಾರೆ.