ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಎರಡು ದಿನದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕೇಂದ್ರ ನಾಯಕರನ್ನು ಭೇಟಿ ಮಾಡಿ, ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರ ಅಂತಿಮಗೊಳಿಸಲಿದ್ದು, ಒಂದು ವಾರದಲ್ಲಿ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ.
ವಿಜಯೇಂದ್ರ ಅವರಿಗೆ ವಿಧಾನಪರಿಷತ್ ಸದಸ್ಯ ಸ್ಥಾನ ನೀಡಿ, ಸಚಿವರನ್ನಾಗಿ ಮಾಡುವ ಕುರಿತಂತೆ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ವಿಧಾನಪರಿಷರ್ ಮತ್ತು ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿದ್ದು, ಕೇಂದ್ರಕ್ಕೆ ವರದಿ ನೀಡಲಾಗುವುದು ಎಂದು ಹೇಳಿದ್ದಾರೆ.