ಬೆಂಗಳೂರು: ಆಂಧ್ರದ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ.
ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಮಳೆಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ರಾಮನಗರ, ಮಂಡ್ಯ, ಮೈಸೂರು, ತುಮಕೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ. ಕೇರಳ ಮತ್ತು ರಾಜ್ಯದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ನೈಋತ್ಯ ಮುಂಗಾರು ಇಂದು ಅಂಡಮಾನ್ ದ್ವೀಪ ಪ್ರವೇಶಿಸಲಿದೆ. ಎರಡು ವಾರ ಮೊದಲೇ ಮುಂಗಾರು ಪ್ರವೇಶಿಸಲಿದ್ದು, ಕೇರಳ, ತಮಿಳುನಾಡು, ಲಕ್ಷದ್ವೀಪಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯ ಮುನ್ಸೂಚನೆ ನೀಡಲಾಗಿದೆ. ಅರಬ್ಬಿಸಮುದ್ರದ ಮೇಲ್ಮೈನಿಂದ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
ಕೇರಳದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು, ಕೇರಳ, ಕರ್ನಾಟಕ ಸೇರಿ ದಕ್ಷಿಣದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.