ಮಂಗಳೂರು: ರಾಜ್ಯದಲ್ಲಿ ಹಿಜಾಬ್, ಹಲಾಲ್, ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ, ಆಜಾನ್ ವರ್ಸಸ್ ಭಜನೆ ವಿವಾದಗಳ ಬೆನ್ನಲ್ಲೇ ಇದೀಗ ಜನಪ್ರತಿನಿಧಿಯೊಬ್ಬರು ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಚುನಾವಣೆಯಲ್ಲಿ ನನಗೆ ಮುಸ್ಲಿಂ ವೋಟುಗಳು ಬೇಡ ಎಂದು ಬಿಜೆಪಿ ಶಾಸಕರೊಬ್ಬರು ಹೇಳಿರುವುದು ಚರ್ಚೆಗೆ ಕಾರಣವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ನನಗೆ ಮುಂದಿನ ಚುನಾವಣೆಯಲ್ಲಿ ಮುಸ್ಲಿಂರ ವೋಟುಗಳು ಬೇಡ. ಹಿಂದೂ ವೋಟುಗಳಿದ್ದರೆ ಸಾಕು ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ವೇದಿಕೆಯಲ್ಲಿ ಮಾತನಾಡಿದ ಬಿಜೆಪಿ ಶಾಸಕ ಹರೀಶ್ ಪೂಂಜಾ, ನನಗೆ ಬ್ಯಾರಿಗಳ ವೋಟು ಬೇಡ. ಹಿಂದೂ ವೋಟುಗಳಿದ್ದರೆ ಸಾಕು ಎಂದಿದ್ದಾರೆ. ಶಾಸಕರ ವಿವಾದಾತ್ಮಕ ಹೇಳಿಕೆ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ.