ಬೆಂಗಳೂರು: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದ ರಹಸ್ಯ ಬಯಲಾಗಿದೆ.
ಬೆಂಗಳೂರಿನ ಹೇರೋಹಳ್ಳಿ ವಾರ್ಡ್ ನ ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಆತ್ಮಹತ್ಯೆ ಕಾರಣ ಬಹಿರಂಗವಾಗಿದೆ. ಹೆಣ್ಣಿನ ಮೋಹ, ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಅನಂತರಾಜು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದಿಬಂದಿದೆ.
ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ನಲ್ಲಿ ಪತ್ನಿಗೆ ಕ್ಷಮೆ ಕೇಳಿದ್ದು, ಪ್ರಿಯ ಪತ್ನಿ ಕ್ಷಮಿಸಿ ಬಿಡು. ನಿನಗೆ ಮೋಸ ಮಾಡಿದ್ದೇನೆ. ನಿನ್ನ ಬಳಿ ಕ್ಷಮೆ ಕೆಳಲೂ ನಾನು ಅರ್ಹನಲ್ಲ. ಹೆಣ್ಣಿನ ಸಹವಾಸ ಮಾಡಿ ಆಕೆಯಿಂದ ಫೋಟೋ, ವಿಡಿಯೋಗಳ ಬ್ಲ್ಯಾಕ್ ಮೇಲ್ ಗೆ ಸಿಲುಕಿದ್ದು, ಮುಖ ತೋರಿಸಲು ಸಾಧ್ಯವಾಗುತ್ತಿಲ್ಲ ಎಂದು ಬರೆದಿದ್ದಾರೆ.
ರೇಖಾ, ವಿನೋದ್, ಸ್ಪಂದನ ಎಂಬುವವರಿಂದ ಹನಿಟ್ರ್ಯಾಪ್ ಗೆ ಒಳಗಾಗಿದ್ದೇನೆ. ಕೆ.ಆರ್.ಪುರದ ರೇಖಾ ಎಂಬುವವಳು ಫೇಸ್ ಬುಕ್ ನಲ್ಲಿ ಪರಿಚಯವಾಗಿದ್ದಳು. ನಂತರ ಖಾಸಗಿ ವಿಡಿಯೋಗಳನ್ನು ಮಾಡಿಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಳು. ರಾಜಕೀಯ ನಾಯಕರಿಗೆ, ಮಾಧ್ಯಮಗಳಿಗೆ ವಿಡಿಯೋ ಕಳಿಸುವುದಾಗಿ ಹೇಳಿ ಹಣ ವಸೂಲಿ ಮಾಡುತ್ತಿದ್ದಳು. ಮರ್ಯಾದೆಗೆ ಹೆದರಿ ಬೇರೆ ದಾರಿಯಿಲ್ಲದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.
ಮೇ 12ರಂದು ಅನಂತರಾಜು ಬ್ಯಾಡರಹಳ್ಳಿ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಎರಡು ಬಾರಿ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದ ಅನಂತರಾಜು ಈ ಬಾರಿ ಮತ್ತೆ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸಿದ್ದರು.