ಲಖ್ನೋ: ಟ್ಯೂಷನ್ ಶಿಕ್ಷಕಿ ಮೇಲೆ ಅತ್ಯಾಚಾರ ಎಸಗಿದ ಮತ್ತು ಅಶ್ಲೀಲ ಫೋಟೋಗಳನ್ನು ಕಳಿಸಿ ಬ್ಲಾಕ್ ಮೇಲ್ ಮಾಡಿದ ಆರೋಪದ ಮೇಲೆ 50 ವರ್ಷದ ವೈದ್ಯನ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ ತನ್ನ ಕೃತ್ಯವನ್ನು ಚಿತ್ರೀಕರಿಸಿ ಸಂತ್ರಸ್ತೆಯನ್ನು ಬ್ಲ್ಯಾಕ್ ಮೇಲ್ ಮಾಡಲು ಬಳಸಿಕೊಂಡಿದ್ದು, ಹಲವಾರು ಸಂದರ್ಭಗಳಲ್ಲಿ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಿಕ್ಷಕಿ ಗರ್ಭಿಣಿಯಾದಾಗ ಗರ್ಭಪಾತ ಮಾತ್ರೆಗಳನ್ನು ಸೇವಿಸುವಂತೆ ಒತ್ತಾಯಿಸಿದ್ದಾನೆ ಎಂದು ಶಿಕ್ಷಕಿ ದೂರು ನೀಡಿದ್ದಾರೆ.
ಆತನ ಮಕ್ಕಳಿಗೆ ಟ್ಯೂಷನ್ ತರಗತಿಗಳನ್ನು ನೀಡಲು ವೈದ್ಯರ ಮನೆಗೆ ಭೇಟಿ ನೀಡುತ್ತಿದ್ದೆ. ವೈದ್ಯರು ತನ್ನ ಚಿತ್ರಗಳನ್ನು ಮಾರ್ಫಿಂಗ್ ಮಾಡಿದ್ದು, ಅವುಗಳನ್ನು ಬ್ಲ್ಯಾಕ್ ಮೇಲ್ ಮಾಡಲು ಬಳಸಿದ್ದಾರೆ. ಹಲವಾರು ತಿಂಗಳುಗಳ ಕಾಲ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಶಿಕ್ಷಕಿ ಹೇಳಿದ್ದಾರೆ.
ಲಖ್ನೋದ ಇಂದಿರಾ ನಗರ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಕಿ ಆರೋಗ್ಯ ಸ್ಥಿತಿ ಹದಗೆಟ್ಟಾಗ ಘಟನೆ ಬೆಳಕಿಗೆ ಬಂದಿದ್ದು, ತನ್ನ ಕುಟುಂಬ ಸದಸ್ಯರಿಗೆ ವೈದ್ಯನ ಕೃತ್ಯದ ಬಗ್ಗೆ ತಿಳಿಸಿದ್ದಾರೆ. ನಂತರ ಸಂತ್ರಸ್ತೆಯ ಸಂಬಂಧಿಕರು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ.
ಟ್ಯೂಷನ್ ತರಗತಿಗೆಂದು ತನ್ನ ಮನೆಗೆ ಬರುತ್ತಿದ್ದ ಶಿಕ್ಷಕಿಯ ಫೋಟೋಗಳನ್ನು ತೆಗೆದುಕೊಂಡು ಮಾರ್ಫ್ ಮಾಡಿ ಆಕೆಯನ್ನು ಬ್ಲಾಕ್ ಮೇಲ್ ಮಾಡಲು ಬಳಸುತ್ತಿದ್ದ ವೈದ್ಯ ಅನೇಕ ಬಾರಿ ಅತ್ಯಾಚಾರವೆಸಗಿದ್ದಾನೆ ಎಂದು ಶಿಕ್ಷಕಿ ಹೇಳಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಲಖ್ನೋ ಉತ್ತರ ವಲಯ ಡಿಸಿಪಿ ಎ.ಎಸ್. ಚಿನ್ನಪ್ಪ ಹೇಳಿದ್ದಾರೆ.