ಮೈಸೂರು: ರಾಜ್ಯಾದ್ಯಂತ ನಿರಂತರ ಮಳೆಯಿಂದ ಬೆಳೆ ಹಾನಿಯಾದ ಹಿನ್ನೆಲೆಯಲ್ಲಿ ಕೃಷಿ ಅಧಿಕಾರಿಗಳು ಹೊಲಗಳಿಗೆ ಹೋಗಿ ಪರಿಶೀಲನೆ ನಡೆಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಕೃಷಿ ಅಧಿಕಾರಿಗಳು ಜಮೀನಿಗೆ ತೆರಳದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಅಧಿಕಾರಿಗಳು ಮಳೆಹಾನಿ ಬಗ್ಗೆ ಮಾಹಿತಿ ಸಂಗ್ರಹಿಸಬೇಕೆಂದು ಸಚಿವರು ಸೂಚನೆ ನೀಡಿದ್ದಾರೆ.
ಬೆಳೆಹಾನಿ ಮಾಹಿತಿ ಸಂಗ್ರಹಿಸಿದ ನಂತರ ಸೂಕ್ತ ಪರಿಹಾರ ನೀಡಲಾಗುತ್ತದೆ. ರೈತರು ಯಾವುದೇ ಆತಂಕಕ್ಕೆ ಒಳಗಾಗಬಾರದು. ರಾಜ್ಯ ಸರ್ಕಾರ ಬೆಳೆ ಹಾನಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಿದೆ ಎಂದು ಕೃಷಿ ಸಚಿವರು ಅಭಯ ನೀಡಿದ್ದಾರೆ.