alex Certify BREAKING NEWS: ಬೆಂಗಳೂರು ಕೆಂಪೇಗೌಡ ಏರ್ ಪೋರ್ಟ್ ಗೆ ಹುಸಿ ಬಾಂಬ್ ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರು ಕೆಂಪೇಗೌಡ ಏರ್ ಪೋರ್ಟ್ ಗೆ ಹುಸಿ ಬಾಂಬ್ ಕರೆ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿ ಕರೆ ಮಾಡಿದ್ದಾನೆ.

ಮುಂಜಾನೆ 3.30 ರ ಸುಮಾರಿಗೆ ಅಪರಿಚಿತ ವ್ಯಕ್ತಿ ಪೊಲೀಸ್ ಕಂಟ್ರೋಲ್ ರೂಂ ಗೆ ಕರೆ ಮಾಡಿ ಬಾಂಬ್ ಇಟ್ಟಿರುವುದಾಗಿ ಹೇಳಿಕೊಂಡಿದ್ದಾನೆ. ಬೆದರಿಕೆ ಕರೆಯಿಂದಾಗಿ ವಿಮಾನನಿಲ್ದಾಣದಲ್ಲಿ ಕೆಲಕಾಲ ಆತಂಕದ ಪರಿಸ್ಥಿತಿ ಉಂಟಾಗಿತ್ತು. ಕರೆ ಬಂದ ಬಳಿಕ ವಿಮಾನ ನಿಲ್ದಾಣದಲ್ಲಿ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಏರ್‌ ಲೈನ್ಸ್ ಗೇಟ್ ಮತ್ತು ಟರ್ಮಿನಲ್ ನಲ್ಲಿ ತೀವ್ರ ತಪಾಸಣೆ ಕೈಗೊಳ್ಳಲಾಗಿದೆ. ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಕರೆ ಮಾಡಿದವನ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...