ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.
ಸುಭಾಷ್ ಗುಪ್ತ ಬಂಧಿತ ಆರೋಪಿ. ಇಂದು ಬೆಳಗಿನ ಜಾವ 3:30ರ ಸುಮಾರಿಗೆ ಏರ್ ಪೋರ್ಟ್ ನ ಪೊಲೀಸ್ ಕಂಟ್ರೋಲ್ ರೂಂ ಗೆ ಕರೆ ಮಾಡಿದ್ದ ಸುಭಾಷ್, ಏರ್ ಪೋರ್ಟ್ ನಲ್ಲಿ ಬಾಂಬ್ ಇರಿಸಲಾಗಿದೆ ಎಂದು ಬೆದರಿಸಿದ್ದ. ಸುಮಾರು 2 ಗಂಟೆಗೂ ಹೆಚ್ಚು ಕಾಲ ತಪಾಸಣೆ ನಡೆಸಿದ ಅಧಿಕಾರಿಗಳಿಗೆ ಇದೊಂದು ಹುಸಿ ಕರೆ ಎಂಬುದು ಗೊತ್ತಾಗಿದೆ.
ಇದೀಗ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿ ಸುಭಾಷ್ ನನ್ನು ಪೊಲೀಸರು ಬಂಧಿಸಿದ್ದಾರೆ. ಭಾವನನ್ನು ಜೈಲಿಗೆ ಕಳುಹಿಸಲು ಆತನ ಹೆಸರಲ್ಲಿ ಕರೆ ಮಾಡಿದ್ದಾಗಿ ತಿಳಿಸಿದ್ದಾನೆ. ತನ್ನ ಅಕ್ಕನಿಗೆ ವಂಚಿಸಿದ್ದ ಭಾವ ಡಿವೋರ್ಸ್ ನೀಡಿದ್ದ. ಇದರಿಂದ ಸೇಡು ತೀರಿಸಿಕೊಳ್ಳಲು ಆತನನ್ನು ಜೈಲಿಗೆ ಅಟ್ಟಬೇಕೆಂದು ಆತನ ಹೆಸರಲ್ಲಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.