alex Certify BIG BREAKING: LPG ಗ್ರಾಹಕರಿಗೆ ಕೇಂದ್ರದಿಂದ ಗುಡ್ ನ್ಯೂಸ್; ಪ್ರತಿ ಸಿಲಿಂಡರ್ ಗೆ 200 ರೂ. ಸಹಾಯಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: LPG ಗ್ರಾಹಕರಿಗೆ ಕೇಂದ್ರದಿಂದ ಗುಡ್ ನ್ಯೂಸ್; ಪ್ರತಿ ಸಿಲಿಂಡರ್ ಗೆ 200 ರೂ. ಸಹಾಯಧನ

ನವದೆಹಲಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ನಡುವ ಕೇಂದ್ರ ಸರ್ಕಾರ ಬಡವರಿಗೆ ಸಿಹಿ ಸುದ್ದಿ ನೀಡಿದೆ. ಪ್ರತಿ ಸಿಲಿಂಡರ್ ಖರೀದಿಗೆ 200 ರೂ. ಸಹಾಯಧನ ನೀಡಲಾಗುವುದು.

ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್‌ ಗೆ (12 ಸಿಲಿಂಡರ್‌ ಗಳವರೆಗೆ) 200 ರೂ. ಸಬ್ಸಿಡಿ ನೀಡುತ್ತೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ.

ಮಹತ್ವದ ಬೆಳವಣಿಗೆಯಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 8 ರೂ., ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ 6 ರೂ. ಇಳಿಕೆ ಮಾಡಲಾಗಿದೆ. ಅಬಕಾರಿ ಸುಂಕ ಕಡಿತವಾದ ಹಿನ್ನೆಲೆಯಲ್ಲಿ ಒಂದು ಲೀಟರ್ ಪೆಟ್ರೋಲ್ ದರ 9.5 ರೂಪಾಯಿ ಇಳಿಕೆಯಾಗಿದೆ. ಇದರಿಂದ ಪ್ರತಿ ಲೀಟರ್‌ ಪೆಟ್ರೋಲ್‌ ದರ 9.5 ರೂ. ಹಾಗೂ ಡೀಸೆಲ್‌ ದರ 7 ರೂ.ಇಳಿಕೆಯಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...