ಮುಂಬೈ: ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ 5 ಟಿ20 ಪಂದ್ಯಗಳ ಸರಣಿ ಮತ್ತು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಪಂದ್ಯಕ್ಕೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಜೂನ್ 9 ರಿಂದ 19 ರವರೆಗೆ ಟಿ20 ಸರಣಿ ನಡೆಯಲಿದ್ದು, 18 ಸದಸ್ಯರ ತಂಡವನ್ನು ಆಯ್ಕೆ ಸಮಿತಿ ಪ್ರಕಟಿಸಿದೆ. ಕೆ.ಎಲ್. ರಾಹುಲ್ ಅವರಿಗೆ ಟಿ20 ನಾಯಕತ್ವ ವಹಿಸಲಾಗಿದೆ. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ಐಪಿಎಲ್ ನಲ್ಲಿ ಗಮನ ಸೆಳೆದ ಜಮ್ಮು ಮತ್ತು ಕಾಶ್ಮೀರದ ಉಮ್ರಾನ್ ಮಲಿಕ್ ಹಾಗೂ ಪಂಜಾಬ್ ಕಿಂಗ್ಸ್ ನ ಆರ್ಶ್ ದೀಪ್ ಸಿಂಗ್ ಅವರಿಗೆ ತಂಡದಲ್ಲಿ ಸ್ಥಾನ ಸಿಕ್ಕಿದೆ.
ಟಿ20 ತಂಡ
ಕೆ.ಎಲ್. ರಾಹುಲ್(ನಾಯಕ), ಋತುರಾಜ ಗಾಯಕವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯಜುಯೇಂದ್ರ ಚಾಹಲ್, ಕುಲದೀಪ್ ಯಾದವ್, ಅಕ್ಷರ ಪಟೇಲ್, ರವಿ ಬಿಷ್ನೋಯ್, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಆರ್ಶ್ ದೀಪ್ ಸಿಂಗ್, ಉಮ್ರಾನ್ ಮಲಿಕ್.
ಅದೇ ಮರು ನಿಗದಿಯಾದ ಇಂಗ್ಲೆಂಡ್ ಪ್ರವಾಸದ ಏಕೈಕ ಟೆಸ್ಟ್ ಪಂದ್ಯಕ್ಕೆ 17 ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಚೇತೇಶ್ವರ ಪೂಜಾರ ಸ್ಥಾನ ಪಡೆದುಕೊಂಡಿದ್ದಾರೆ.
ಟೆಸ್ಟ್ ತಂಡ:
ರೋಹಿತ್ ಶರ್ಮಾ(ನಾಯಕ), ಕೆ.ಎಲ್. ರಾಹುಲ್(ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ, ರಿಷಬ್ ಪಂತ್, ಕೆ.ಎಸ್. ಭರತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದುಲ್ ಠಾಕೂರ್, ಮೊಹಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ ಕೃಷ್ಣ.