ಬೆಂಗಳೂರು: ನಾಡಗೀತೆಯನ್ನು ಅವಹೇಳನ ಮಾಡಿರುವ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನಾಡಗೀತೆ, ರಾಷ್ಟ್ರಕವಿಯನ್ನು ಗೇಲಿ ಮಾಡಿದ ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ ಬಿಜೆಪಿ ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಅಲ್ಲದೇ ನಾಡಗೀತೆಯನ್ನು ಕಾಂಗ್ರೆಸ್ ನಾಯಕರಿಗೆ ಹೋಲಿಸುವ ರೀತಿಯಲ್ಲಿ ವ್ಯಂಗ್ಯಭರಿತವಾಗಿ ರೋಹಿತ್ ಚಕ್ರತೀರ್ಥ ಬರೆದಿರುವ ಸಾಲುಗಳ ಲಿಂಕ್ ಗಳನ್ನು ಸೇರಿಸಿರುವ ಸಿದ್ದರಾಮಯ್ಯ, ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.