ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ರಾಮನಗರ ಜಿಲ್ಲಾ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಕೋರ್ಟ್ ನಿಂದ ಸಿದ್ದರಾಮಯ್ಯಗೆ ಸಮನ್ಸ್ ಜಾರಿಯಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ನಾಳೆ ಖುದ್ದು ಕೋರ್ಟ್ ಗೆ ಹಾಜರಾಗುವಂತೆ ರಾಮನಗರ ಕೋರ್ಟ್ ಸಮನ್ಸ್ ನಲ್ಲಿ ತಿಳಿಸಿದೆ. ಕೋವಿಡ್ ಸಂದರ್ಭದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಕೂಡ ನಿಯಮ ಉಲ್ಲಂಘನೆ ಮಾಡಿ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಹಲವು ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಕೋರ್ಟ್ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸಮನ್ಸ್ ಜಾರಿ ಮಾಡಿದೆ.