ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ವರಿಷ್ಠರು ಅಂತಿಮಗೊಳಿಸಿದ್ದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರಗೆ ಟಿಕೆಟ್ ಕೈತಪ್ಪಿದೆ.
ಪರಿಷತ್ ಚುನಾವಣೆಯಲ್ಲಿ ಕುಟುಂಬ ರಾಜಕಾರಣಕ್ಕೆ ಬಿಜೆಪಿ ಮಣೆ ಹಾಕದೇ ಲಿಂಗಾಯಿತ ಕೋಟಾದಡಿಯಲ್ಲಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಒಕ್ಕಲಿಗ ಹಾಗೂ ಮಹಿಳಾ ಕೋಟಾದ ಅಡಿಯಲ್ಲಿ ಭದ್ರಾವತಿಯ ಸಿ. ಮಂಜುಳಾ, ದಲಿತ ಕೋಟಾದಡಿಯಲ್ಲಿ ಎಸ್ಸಿ ಘಟಕದ ರಾಜ್ಯಾಧ್ಯಕ್ಷ ಚಲವಾದಿ ನಾರಾಯಣಸ್ವಾಮಿ ಮತ್ತು ಒಬಿಸಿ ಅಡಿಯಲ್ಲಿ ಪಕ್ಷದ ಕಚೇರಿ ಕಾರ್ಯದರ್ಶಿ ಕೇಶವ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ. ವಿಧಾನಪರಿಷತ್ ಸದಸ್ಯರಾಗಿ ಸಂಪುಟ ಸೇರುವ ನಿರೀಕ್ಷೆಯಲ್ಲಿದ್ದ ವಿಜಯೇಂದ್ರ ಅವರಿಗೆ ಭಾರಿ ನಿರಾಸೆಯಾಗಿದೆ ಎನ್ನಲಾಗಿದೆ.