ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಪ್ರಕಟ ಬೆನ್ನಲ್ಲೇ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕೂಡ ಬಿಜೆಪಿ ಅಭ್ಯರ್ಥಿ ಪ್ರಕಟಿಸಿದೆ.
ಪಶ್ಚಿಮ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನ ಖಾಲಿ ಇದ್ದು, ಬಸವರಾಜ್ ಹೊರಟ್ಟಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಜೂನ್ 13ರಂದು ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಬಿಜೆಪಿ ಟಿಕೆಟ್ ಹೊರಟ್ಟಿ ಪಾಲಾಗಿದೆ.
ನಿಗೂಢ ತ್ರಿವಳಿ ಆತ್ಮಹತ್ಯೆ: ಸಾಯುವ ಕುರಿತ ವಿಭಿನ್ನ ವಿಡಿಯೋ ವೀಕ್ಷಿಸಿದ್ದ ಮಹಿಳೆಯರು
ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಬಸವರಾಜ್ ಹೊರಟ್ಟಿ, ಸಭಾಪತಿ ಹುದ್ದೆಗೂ ರಾಜೀನಾಮೆ ನೀಡಿದ್ದರು.