ಚಂಡಿಗಢ: ಪಂಜಾಬ್ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರು ಖರೀದಿ ಮತ್ತು ಟೆಂಡರ್ ನಲ್ಲಿ ಶೇಕಡ 1 ರಷ್ಟು ಕಮಿಷನ್ ಪಡೆದ ಆರೋಪದ ಹಿನ್ನೆಲೆಯಲ್ಲಿ ಸಚಿವ ಸಂಪುಟದಿಂದ ಅವರನ್ನು ವಜಾಗೊಳಿಸಲಾಗಿದೆ. ಇದರ ಬೆನ್ನಲ್ಲೇ ಭ್ರಷ್ಟಾಚಾರ ನಿಗ್ರಹದಳದಿಂದ ಅವರನ್ನು ಬಂಧಿಸಲಾಗಿದೆ.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಸಚಿವ ಸಂಪುಟದಿಂದ ವಿಜಯ್ ಸಿಂಗ್ಲಾ ಅವರನ್ನು ವಜಾಗೊಳಿಸಿರುವುದನ್ನು ತಿಳಿಸಿದ್ದಾರೆ. ಎರಡು ತಿಂಗಳ ಹಿಂದೆಯಷ್ಟೇ ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದಿದ್ದು, ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಅವರ ನಡೆಯನ್ನು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಶ್ಲಾಘಿಸಿದ್ದಾರೆ. ನಿಮ್ಮ ನಡೆಯಿಂದ ಪಕ್ಷವು ಹೆಮ್ಮೆಪಡುವಂತಾಗಿದೆ ಎಂದು ಹೇಳಿದ್ದಾರೆ.