ಮಂಗಳೂರು: ಮಳಲಿಯ ಮಸೀದಿ ಸ್ಥಳದಲ್ಲಿ ದೇವರು ಇರುವುದು ನಿಜ ಎಂದು ತಾಂಬೂಲ ಪ್ರಶ್ನೆಯ ವೇಳೆ ದೈವಜ್ಞ ಗೋಪಾಲಕೃಷ್ಣ ಪಣಿಕ್ಕರ್ ಮಾಹಿತಿ ನೀಡಿದ್ದಾರೆ. ಕೇರಳದ ಪ್ರಖ್ಯಾತ ಜ್ಯೋತಿಷಿ ಜೆ.ಪಿ. ಗೋಪಾಲಕೃಷ್ಣ ಪಣಿಕರ್ ಅವರು ಮಸೀದಿ ಸ್ಥಳದಲ್ಲಿ ತಾಂಬೂಲ ಪ್ರಶ್ನೆ ಮೂಲಕ ದೇವರು ಇರುವುದು ನಿಜ ಎಂದು ಹೇಳಿದ್ದಾರೆ.
ಮಂಗಳೂರಿನ ಮಳಲಿಯ ಜುಮಾ ಮಸೀದಿಯಲ್ಲಿ ದೇವರು ಇರುವ ಬಗ್ಗೆ ಮಾಹಿತಿ ನೀಡಲಾಗಿದೆ. ಮಸೀದಿಯ ಕೆಳಗೆ ಹಿಂದೂ ದೇವಾಲಯದಂತಹ ವಾಸ್ತುಶಿಲ್ಪದ ವಿನ್ಯಾಸಗಳು ಕಂಡುಬಂದಿದ್ದು, ಇದು ವಿವಾದಕ್ಕೆ ಕಾರಣವಾಗಿದ್ದರಿಂದ ತಾಂಬೂಲ ಪ್ರಶ್ನೆ ಕೇಳಲಾಗಿತ್ತು.
ಸಾಮಾನ್ಯ ತಾಂಬೂಲ ಪ್ರಶ್ನೆಯಲ್ಲಿ ಪೂರ್ಣವಾದ ಚೈತನ್ಯವಿದೆ. ನಾವು ಪ್ರಾರ್ಥಿಸಿ ಇಟ್ಟ ರಾಶಿಯಲ್ಲಿ ದೇವರು ಇರುವುದು ನಿಜ. ಪೂರ್ವದಲ್ಲಿ ಇದೊಂದು ಮಠದ ರೂಪದಲ್ಲಿತ್ತು ಎನ್ನುವುದು ಗೊತ್ತಾಗುತ್ತದೆ. ಇದು ದೈವ ಸಾನಿಧ್ಯ ಇದ್ದಂತಹ ಸ್ಥಳವಾಗಿದೆ ಎಂದು ತಾಂಬೂಲ ಪ್ರಶ್ನೆಯಲ್ಲಿ ಗೊತ್ತಾಗಿದೆ. ಇಂದು ಧಾರ್ಮಿಕ ಸ್ಥಳ ಎನ್ನುವ ಉತ್ತರ ಗೊತ್ತಾಗಿದೆ. ಇಲ್ಲಿ ಗುರುಪೀಠ ಇತ್ತು ಎಂದು ತಾಂಬೂಲ ಪ್ರಶ್ನೆಯಲ್ಲಿ ಕಂಡು ಬರುತ್ತಿದೆ. ಯಾವುದೋ ಒಂದು ಕಾಲದಲ್ಲಿ ದೇವಸ್ಥಾನ ಇತ್ತು ಎನ್ನುವುದು ತಿಳಿಯುತ್ತದೆ ಎಂದು ದೈವಜ್ಞ ಗೋಪಾಲಕೃಷ್ಣ ಪಣಿಕ್ಕರ್ ಹೇಳಿದ್ದಾರೆ.