ಬೆಂಗಳೂರು: ಬಿ.ವೈ.ವಿಜಯೇಂದ್ರಗೆ ವಿಧಾನ ಪರಿಷತ್ ಟಿಕೆಟ್ ಕೈತಪ್ಪಿದ್ದಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರಗೆ ಬೇರೆ ಬೇರೆ ಅವಕಾಶಗಳಿವೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಈಗಾಗಲೇ ವಿಜಯೇಂದ್ರಗೆ ಉಪಧ್ಯಕ್ಷ ಸ್ಥಾನ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಹೈಕಮಾಂಡ್ ಇನ್ನೂ ಹೆಚ್ಚಿನ ಸ್ಥಾನ ಮಾನ ನೀಡುವ ವಿಶ್ವಾಸವಿದೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡುವ ನಿರೀಕ್ಷೆಯಿದೆ ಎಂದು ಹೇಳಿದರು.
ಟಿಕೆಟ್ ವಿಚಾರದಲ್ಲಿ ಸಂತೋಷ್ ಅವರ ಹೆಸರನ್ನು ಅನಗತ್ಯವಾಗಿ ತರುವುದು ಬೇಡ. ಇಂತಹ ಆರೋಪದಲ್ಲಿ ಯಾವುದೇ ಅರ್ಥವಿಲ್ಲ ಎಂದು ಸ್ಪಷ್ಟಪಡಿಸಿದರು.