ಮೈಸೂರು: ಸಿ.ಎಂ. ಇಬ್ರಾಹಿಂ ಅವರು ಎಲ್ಲಿರುತ್ತಾರೆಯೋ ಆ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, 1994 ರಲ್ಲಿ ಇಬ್ರಾಹಿಂ ನಮ್ಮ ಪಕ್ಷದಲ್ಲಿ ಇದ್ದಾಗ 118 ಸ್ಥಾನ ಬಂದಿತ್ತು. ಆಗ ಹೆಚ್.ಡಿ. ದೇವೇಗೌಡರು ಮುಖ್ಯಮಂತ್ರಿಯಾಗಿದ್ದರು. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗುವ ಪಕ್ಷ ಜೆಡಿಎಸ್. ಸಿ.ಎಂ. ಇಬ್ರಾಹಿಂ ಅವರನ್ನು ನಮ್ಮ ಪಕ್ಷ ಗೌರವಯುತವಾಗಿ ನಡೆಸಿಕೊಳ್ಳುತ್ತದೆ ಎಂದು ರೇವಣ್ಣ ಹೇಳಿದ್ದಾರೆ.