alex Certify ರೈತರೇ ಗಮನಿಸಿ: ಖಾತೆಗೆ 6 ಸಾವಿರ ರೂ. ಜಮಾ ಮಾಡುವ ಕಿಸಾನ್ ಸಮ್ಮಾನ್ ಯೋಜನೆ ಅಪ್ ಡೇಟ್ ಗೆ ಮೇ 31 ಕೊನೆ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ: ಖಾತೆಗೆ 6 ಸಾವಿರ ರೂ. ಜಮಾ ಮಾಡುವ ಕಿಸಾನ್ ಸಮ್ಮಾನ್ ಯೋಜನೆ ಅಪ್ ಡೇಟ್ ಗೆ ಮೇ 31 ಕೊನೆ ದಿನ

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಇ -ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಮೇ 31 ಕೊನೆಯ ದಿನವಾಗಿದೆ.

ಈ ಯೋಜನೆಯಡಿ 4 ತಿಂಗಳಿಗೊಮ್ಮೆ ತಲಾ 2 ಸಾವಿರ ರೂಪಾಯಿಯಂತೆ ವಾರ್ಷಿಕ 6000 ರೂ.ಗಳನ್ನು ಫಲಾನುಭವಿ ರೈತರ ಖಾತೆಗೆ ಜಮಾ ಮಾಡಲಾಗುತ್ತದೆ. ಇ -ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸದ ರೈತರಿಗೆ ಮುಂದಿನ ಕಂತುಗಳನ್ನು ನಿಲ್ಲಿಸುವ ಸಾಧ್ಯತೆ ಇದೆ.

ಇ-ಕೆವೈಸಿ ಪೂರ್ಣಗೊಳಿಸದ ರೈತರು http:pmkisan.gov.in ವೆಬ್ಸೈಟ್ ಅಥವಾ ಮೊಬೈಲ್ ಮೂಲಕ ಇ -ಕೆವೈಸಿ ಅಪ್ಡೇಟ್ ಪೂರ್ಣಗೊಳಿಸಬಹುದಾಗಿದೆ. ಇದಲ್ಲದೆ, ಗ್ರಾಮ ಒನ್ ಸೇವಾ ಕೇಂದ್ರಗಳು ಅಥವಾ ಸೈಬರ್ ಸೆಂಟರ್ ಗಳಲ್ಲಿಯೂ ರೈತರು ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಮೇ 22ರ ವರೆಗೆ ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಅವಕಾಶವನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...