ಮಂಗಳೂರು: ಮಂಗಳೂರಿನ ಯೂನಿವರ್ಸಿಟಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಉಂಟಾಗಿದ್ದ ಹಿನ್ನಲೆಯಲ್ಲಿ ಮಹತ್ವದ ಸಭೆ ನಡೆಸಲಾಗಿದೆ.
ಸಭೆಯ ಬಳಿಕ ಮಂಗಳೂರು ವಿವಿ ಉಪಕುಲಪತಿ ಡಾ. ಸುಬ್ರಹ್ಮಣ್ಯ ಮಾತನಾಡಿ, ಯಾವುದೇ ಕಾರಣಕ್ಕೂ ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬರುವಂತಿಲ್ಲ. ಕಾಲೇಜು ಕ್ಯಾಂಪಸ್ ಒಳಗೆ ಹಿಜಾಬ್ ಧರಿಸಿಕೊಂಡು ಬರಬಹುದು. ಆದರೆ, ಲೈಬ್ರರಿ ಮತ್ತು ತರಗತಿಗಳಿಗೆ ಹಿಜಬ್ ಧರಿಸಿ ಪ್ರವೇಶಿಸುವಂತಿಲ್ಲ. ಪ್ರತ್ಯೇಕ ಕೊಠಡಿಯಲ್ಲಿ ಹಿಜಾಬ್ ತೆಗೆದಿಟ್ಟು ತರಗತಿಗಳಿಗೆ ಹಾಜರಾಗಬೇಕಿದೆ. ಇದನ್ನು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿನಿಯರಿಗೆ ಕೌನ್ಸೆಲಿಂಗ್ ಮಾಡುತ್ತೇವೆ. ಬೇರೆ ಕಾಲೇಜಿಗೆ ಹೋಗುವುದಾದರೆ ವ್ಯವಸ್ಥೆ ಮಾಡುತ್ತೇವೆ. ಕಾನೂನಿನಲ್ಲಿ ಮಾರ್ಪಾಡು ಮಾಡಬಹುದು. ಆದರೆ, ಉಲ್ಲಂಘಿಸಲಾಗಲ್ಲ. ನಮಗೆ ಬಂದ ಆದೇಶದ ಪ್ರಕಾರ ಪದವಿ ಕಾಲೇಜುಗಳಿಗೂ ಕೋರ್ಟ್ ಆದೇಶ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ.