ಬೆಂಗಳೂರು: 545 ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಹಿನ್ನೆಲೆಯಲ್ಲಿ ನೊಂದ ಪ್ರಾಮಾಣಿಕ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾ ನಿರತರನ್ನು ಭೇಟಿಯಾದ ಸಿಎಂ ಬಸವರಾಜ್ ಬೊಮ್ಮಾಯಿ ಅಭ್ಯರ್ಥಿಗಳನ್ನು ಸಮಾಧಾನ ಪಡಿಸುವ ಯತ್ನ ನಡೆಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನೊಂದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದು, ತಮಗಾದ ಅನ್ಯಾಯಕ್ಕೆ ನ್ಯಾಯಕೊಡಿಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೇ ಮರು ಪರೀಕ್ಷೆ ರದ್ದು ಮಾಡುವಂತೆ ಆಗ್ರಹಿಸಿದ್ದಾರೆ.
BIG NEWS: RSS ಮೂಲ ಪ್ರಶ್ನಿಸಿದ ಸಿದ್ದರಾಮಯ್ಯ; ಕಾಂಗ್ರೆಸ್ ನಾಯಕರ ಮೂಲ ವಿವರಿಸಿ ತಿರುಗೇಟು ಕೊಟ್ಟ BJP
ಪ್ರಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ್ ಬೊಮ್ಮಾಯಿ, ನೊಂದ ಅಭ್ಯರ್ಥಿಗಳ ಸಮಸ್ಯೆ ಆಲಿಸಿ ಮನವಿ ಪತ್ರ ಸ್ವೀಕರಿಸಿದರು. ಇದೇ ವೇಳೆ ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮದ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದ್ದು, ತನಿಖೆ ಮುಗಿಯುವವರೆಗೂ ಯಾವುದೇ ಭರವಸೆ ನೀಡಲಾಗದು ಎಂದರು.
ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗಬಾರದು ಎಂಬುದೇ ನಮ್ಮ ಉದ್ದೇಶ. ಆದರೆ ತನಿಖೆ ಪೂರ್ಣಗೊಳ್ಳುವವರೆಗೂ ಯಾವುದೇ ಭರವಸೆಯನ್ನು ನೀಡಲು ಸಾಧ್ಯವಿಲ್ಲ. ಮನವಿ ಪತ್ರವನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದರು.