ನೆಲಮಂಗಲ: ಮೂಡಬಿದ್ರೆ ಮೂಲದ ಟ್ರಾನ್ಸ್ ಪೋರ್ಟ್ ಮಾಲೀಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೆಸರಘಟ್ಟ ರಸ್ತೆಯ ಹಾವನೂರು ಬಡಾವಣೆ ಮನೆಯಲ್ಲಿ ನಡೆದಿದೆ.
ಪ್ರಮೋದ್ ಹೆಗಡೆ (45) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಪತ್ನಿ ವೀಣಾ ಸಂಬಂಧಿಕರ ಮನೆಗೆ ಹೋಗಿದ್ದ ಸಂದರ್ಭದಲ್ಲಿ ಪ್ರಮೋದ್ ಹೆಗಡೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ನೇಹಿತರ ಜತೆ ಕ್ರಿಕೆಟ್ ಮ್ಯಾಚ್ ನೋಡುತ್ತಿದ್ದ ಪ್ರಮೋದ್ ರಾತ್ರಿ 10:30ರ ವೇಳೆ ಮನೆಯಲ್ಲಿಯೇ ನೇಣಿಗೆ ಕೊರಳೊಡ್ಡಿರುವ ಶಂಕೆ ವ್ಯಕ್ತವಾಗಿದೆ. ಪತ್ನಿ ಕರೆ ಮಾಡಿದರೆ ಫೋನ್ ಸ್ವಿಚ್ಡ್ ಆಫ್ ಬಂದಿದೆ. ಹೀಗಾಗಿ ಶಶಿಗೌಡ ಎಂಬುವವರಿಗೆ ಕರೆ ಮಾಡಿರುವ ಪತ್ನಿ ವೀಣಾ ಮನೆ ಬಳಿ ಹೋಗಿ ನೋಡುವಂತೆ ತಿಳಿಸಿದ್ದಾರೆ. ಈ ವೇಳೆ ಪ್ರಮೋದ್ ಹೆಗಡೆ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.
ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.