ರಾಜ್ಯಕ್ಕೆ ಜೂನ್ 2 ರಂದು ಮುಂಗಾರು ಮಳೆ ಪ್ರವೇಶವಾಗಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಉತ್ತರ ಕನ್ನಡ, ಕರಾವಳಿ ಜಿಲ್ಲೆಗಳು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬಹುದು. ಮುಂದಿನ 2-3 ದಿನಗಳಲ್ಲಿ ಬೆಂಗಳೂರಿನಲ್ಲಿ 7 ಮಿಲಿಮೀಟರ್ ವರೆಗೆ ಮಳೆ ಬೀಳುವ ಸಾಧ್ಯತೆ ಇದೆ.
ಬೆಂಗಳೂರು ನಗರದಲ್ಲಿ ಮುಂದಿನ ಎರಡು-ಮೂರು ದಿನಗಳಲ್ಲಿ ಹಗುರವಾದ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.