ಲಖ್ನೋ: ಉತ್ತರ ಪ್ರದೇಶದ ಬರೇಲಿಯಲ್ಲಿ ಕ್ಯಾಂಟರ್ ಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದು 7 ಮಂದಿ ಸಾವು ಕಂಡಿದ್ದಾರೆ. ಮಂಗಳವಾರ ಬೆಳಗ್ಗೆ ಬರೇಲಿಯ ಫತೇಗಂಜ್ ಥಾನಾ ಪ್ರದೇಶದಲ್ಲಿ ಕ್ಯಾಂಟರ್ ಗೆ ಆಂಬ್ಯುಲೆನ್ಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ರಾಮಮೂರ್ತಿ ಆಸ್ಪತ್ರೆಯ ಆಂಬ್ಯುಲೆನ್ಸ್ ದೆಹಲಿಯಿಂದ ಬರೇಲಿಗೆ ಬರುತ್ತಿತ್ತು. ರಾಷ್ಟ್ರೀಯ ಹೆದ್ದಾರಿಯ ಸಂಖಾ ಸೇತುವೆ ಬಳಿ ಅಪಘಾತ ಸಂಭವಿಸಿದೆ ಎಂದು ಫತೇಗಂಜ್ ಪಶ್ಚಿಮ ವಲಯ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಿಎಂ ಕಚೇರಿಯ ಟ್ವಿಟ್ಟರ್ ಹ್ಯಾಂಡಲ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ಬರೇಲಿ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪ್ರಾಣಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.