alex Certify ಪಿಎಂ ಕಿಸಾನ್ ಫಲಾನುಭವಿ ರೈತರಿಗೆ ಮುಖ್ಯ ಮಾಹಿತಿ: ಇ-ಕೆವೈಸಿ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಂ ಕಿಸಾನ್ ಫಲಾನುಭವಿ ರೈತರಿಗೆ ಮುಖ್ಯ ಮಾಹಿತಿ: ಇ-ಕೆವೈಸಿ ಕಡ್ಡಾಯ

ಬಳ್ಳಾರಿ: ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಕೃಷಿ ಇಲಾಖೆ ಸೂಚಿಸಿದ ಫಲಾನುಭವಿಗಳು httpis//pmkisan.gov.in ಗೆ ಭೇಟಿ ನೀಡಿ ಇ-ಕೆವೈಸಿ ಆಯ್ಕೆ ಕ್ಲಿಕ್ ಮಾಡಿ ಆಧಾರ್ ಸಂಖ್ಯೆ ನಮೂದಿಸಿ, ಬಳಿಕ ಆಧಾರ್ ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ನಮೂದಿಸಬೇಕು.

ಮೊಬೈಲ್ ಸಂಖ್ಯೆಗೆ ಬರುವ ಒಟಿಪಿ ನಮೂದಿಸಿ ಪ್ರಕ್ರಿಯೆ ಇ-ಕೆವೈಸಿ ಪೂರ್ಣಗೊಳಿಸಬೇಕು. ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಒಟಿಪಿ ಸೃಜನೆಯಾಗದ ರೈತರು ಹತ್ತಿರದ ಗ್ರಾಮ ಪಂಚಾಯತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಅಥವಾ ಸೈಬರ್ ಗಳಲ್ಲಿ ಇ-ಕೆವೈಸಿ ಮಾಡಲು ಅವಕಾಶವಿರುತ್ತದೆ.

ಆದ್ದರಿಂದ ಜಿಲ್ಲೆಯ ಪ್ರತಿಯೊಬ್ಬ ಫಲಾನುಭವಿ ರೈತರು ಜು.31 ರೊಳಗೆ ಇ-ಕೆವೈಸಿ ಮಾಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿ ಹಾಗೂ ದೂ.08392-276224ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...