ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಐದು ಜನರಿಗೆ ದೆಹಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಇಡಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ವಿಶೇಷ ನ್ಯಾಯಾಲಯ ಡಿ.ಕೆ.ಶಿವಕುಮಾರ್ ಗೆ ಸಮನ್ಸ್ ಜಾರಿ ಮಾಡಿದೆ.
ಡಿ.ಕೆ.ಶಿವಕುಮಾರ್, ಸಚಿನ್ ನಾರಾಯಣ್, ಸುನೀಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಹಾಗೂ ರಾಜೇಂದ್ರಗೆ ಸಮನ್ಸ್ ಜಾರಿ ಮಾಡಿದೆ. ಜುಲೈ 1ರಂದು ಕೋರ್ಟ್ ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.