alex Certify ರಾಕೇಶ್ ಟಿಕಾಯತ್ ಗೆ ‘ಮಸಿ’ ಬಳಿದಿದ್ದರ ಹಿಂದಿನ ಕಾರಣ ಬಹಿರಂಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಕೇಶ್ ಟಿಕಾಯತ್ ಗೆ ‘ಮಸಿ’ ಬಳಿದಿದ್ದರ ಹಿಂದಿನ ಕಾರಣ ಬಹಿರಂಗ

ರೈತ ನಾಯಕ ರಾಕೇಶ್ ಟಿಕಾಯತ್ ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಕೆಲವರು ಅವರ ಮುಖಕ್ಕೆ ಮಸಿ ಬಳಿದಿದ್ದು, ಇದು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ಹಲವರನ್ನು ಬಂಧಿಸಿದ್ದಾರೆ.

ಇದೀಗ ಆರೋಪಿಗಳ ವಿಚಾರಣೆ ವೇಳೆ ಕುತೂಹಲಕಾರಿ ಅಂಶವೊಂದು ಬಹಿರಂಗವಾಗಿದೆ. ಪ್ರಕರಣದ ಪ್ರಮುಖ ಆರೋಪಿ ಭರತ್ ಶೆಟ್ಟಿ, ಹೀಗೆ ಮಾಡಿದರೆ ತಾನು ಜನಪ್ರಿಯನಾಗಬಹುದೆಂಬ ಕಾರಣಕ್ಕೆ ಈ ಕೃತ್ಯ ಎಸಗಿದ್ದ ಎನ್ನಲಾಗಿದ್ದು ಜೊತೆಗೆ ಮೋದಿ ಎಂಬ ಘೋಷಣೆ ಕೂಗಿದರೆ ತಮಗೆ ವ್ಯಾಪಕ ಬೆಂಬಲ ಸಿಗಬಹುದೆಂಬ ಲೆಕ್ಕಾಚಾರ ಹೊಂದಿದ್ದ ಎಂದು ಹೇಳಲಾಗಿದೆ.

ಮತ್ತೊಂದು ಪ್ರಮುಖ ಅಂಶವೆಂದರೆ ಭರತ್ ಶೆಟ್ಟಿ ವಿರುದ್ಧ ಈ ಹಿಂದೆಯೇ ವಂಚನೆ, ಬೆದರಿಕೆ, ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದಲ್ಲಿ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ತಿಳಿದುಬಂದಿದೆ. ಮತ್ತೊಬ್ಬ ಆರೋಪಿ ಶಿವಕುಮಾರ್ ಸಹ ತನ್ನ ಸಹೋದರಿ ಪತಿಯ ಕೊಲೆ ಮಾಡಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದು, ಕೆಲ ವರ್ಷಗಳ ಹಿಂದೆ ಸನ್ನಡತೆ ಕಾರಣಕ್ಕೆ ಬಿಡುಗಡೆಯಾಗಿದ್ದ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...