ಮಂಗಳೂರು: ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ಆರಂಭವಾಗಿದ್ದು, ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿರುವ ಘಟನೆ ಉಪ್ಪಿನಂಗಡಿ ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ.
ಹಿಜಾಬ್ ಧರಿಸಿ ಕಾಲೇಜಿಗೆ ಬರಲು ಅವಕಾಶವಿಲ್ಲ ಎಂದು ಹಲವು ಬಾರಿ ಸೂಚನೆ ನೀಡಿದ್ದರೂ ವಿದ್ಯಾರ್ಥಿನಿಯರು ಯಾವುದೇ ನಿಯಮ ಪಾಲಿಸದೇ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಲಾಗಿದೆ.
ಉಪನ್ಯಾಸಕರ ಸಭೆಯಲ್ಲಿ ಕೈಗೊಂಡ ಒಮ್ಮತದ ನಿರ್ಧಾರದ ಬಳಿಕ ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಲಾಗಿದೆ.