alex Certify RSS ಕಂಡರೆ ನನಗೆ ಭಯ ಎಂದ ಸಿದ್ದರಾಮಯ್ಯ; ಅದರ ಹಿಂದಿನ ಕಾರಣವನ್ನು ಸರಣಿ ಟ್ವೀಟ್‌ ಮೂಲಕ ಬಿಚ್ಚಿಟ್ಟ ಮಾಜಿ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

RSS ಕಂಡರೆ ನನಗೆ ಭಯ ಎಂದ ಸಿದ್ದರಾಮಯ್ಯ; ಅದರ ಹಿಂದಿನ ಕಾರಣವನ್ನು ಸರಣಿ ಟ್ವೀಟ್‌ ಮೂಲಕ ಬಿಚ್ಚಿಟ್ಟ ಮಾಜಿ ಸಿಎಂ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಆರ್. ಎಸ್.‌ ಎಸ್.‌ ಕಂಡರೆ ಭಯ ಎಂದು ಸಂಸದ ಡಿ.ವಿ. ಸದಾನಂದ ಗೌಡ ಹೇಳಿದ್ದರು. ಇದೀಗ ಅದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಆರ್.ಎಸ್.ಎಸ್ ಕಂಡರೆ ನನಗೆ ಭಯ ಎಂದು‌ ಮಾಜಿ‌ ಮುಖ್ಯಮಂತ್ರಿ ಸದಾನಂದ ಗೌಡ ಹೇಳಿರುವುದು ನೂರಕ್ಕೆ ನೂರು ನಿಜ ಎಂದಿದ್ದಾರೆ.

ಸರಣಿ ಟ್ವೀಟ್‌ ಮೂಲಕ ಇದರ ಹಿಂದಿನ ಕಾರಣಗಳನ್ನು ಸಿದ್ದರಾಮಯ್ಯ ಬಿಚ್ಚಿಟ್ಟಿದ್ದು, ಆರ್.ಎಸ್.ಎಸ್ ಕಂಡರೆ ನನಗೆ ಭಯ ಎಂದು‌ ಮಾಜಿ‌ ಮುಖ್ಯಮಂತ್ರಿ ಸದಾನಂದ ಗೌಡ ಅವರು ಹೇಳಿರುವುದು ನೂರಕ್ಕೆ ನೂರರಷ್ಟು ಸತ್ಯ. ನನಗೆ ಮಾತ್ರವಲ್ಲ ಜಾತ್ಯತೀತತೆ, ಸೌಹಾರ್ದತೆ ಮತ್ತು ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ ಕಂಡರೆ ಭಯ ಇದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಭಯ ಹುಟ್ಟಿಸುವವರನ್ನು ಸಾಮಾನ್ಯ ಭಾಷೆಯಲ್ಲಿ ಭಯೋತ್ಪಾದಕರು ಎನ್ನಲಾಗುತ್ತಿದೆ. ಅವರು ಯಾಕೆ ತನ್ನ‌ ಮಾತೃ ಸಂಸ್ಥೆಯ ಮೇಲೆ ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು. ಆರ್.ಎಸ್.ಎಸ್ ಬಗೆಗಿನ ಭಯದ ಕಾರಣದಿಂದಾಗಿಯೇ ಮಹಾತ್ಮ ಗಾಂಧೀಜಿಯವರ ಹತ್ಯೆಯ ನಂತರ RSS ಮೇಲೆ ದೇಶದ ಮೊದಲ ಗೃಹಸಚಿವ‌ ವಲ್ಲಭಭಾಯಿ‌ ಪಟೇಲ್ ಅವರು ನಿಷೇಧ ಹೇರಿದ್ದು ಎನ್ನುವುದು ನೆನಪಿರಲಿ ಎಂದು ತಿಳಿಸಿದ್ದಾರೆ.

ಉನ್ನತ ಪದಾಧಿಕಾರದಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳಾದ ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದೂರ ಇಟ್ಟಿರುವ ಕಾರಣಕ್ಕಾಗಿಯೇ ಈ‌ ಸಮುದಾಯಗಳಂತೆ ನನಗೂ ಬಗ್ಗೆ ಭಯ ಇದೆ. ಮೀಸಲಾತಿ, ಭೂಸುಧಾರಣೆಯಂತಹ ಬಹುಸಂಖ್ಯೆಯ ಹಿಂದೂಗಳೇ ಫಲಾನುಭವಿಗಳಾಗಿರುವ ಸಾಮಾಜಿಕ ನ್ಯಾಯದ ಕಾನೂನುಗಳನ್ನೇ ವಿರೋಧಿಸುವ ಬಗ್ಗೆ ಭಯವಲ್ಲದೆ ಪ್ರೀತಿ ಇರಲು ಸಾಧ್ಯವೇ? ತಮ್ಮ ಮಕ್ಕಳಿಗೆ ದೇಶ-ವಿದೇಶದಲ್ಲಿ ಉನ್ನತ ಶಿಕ್ಷಣ ಕೊಡಿಸಿ, ದಲಿತ, ಹಿಂದುಳಿದ ಸಮುದಾಯದ ಬಡವರ ಮಕ್ಕಳನ್ನು ಹಿಂಸಾಚಾರಕ್ಕೆ ಇಳಿಸಿ ಜೈಲಿಗೆ ಅಟ್ಟುವ RSS ಬಗ್ಗೆ ಭಯ ಸಹಜ ಅಲ್ಲವೇ ಸದಾನಂದ ಗೌಡ ಅವರೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಯಾವುದೇ ವ್ಯಕ್ತಿ-ಸಿದ್ದಾಂತ- ಸಂಸ್ಥೆ ಇತರರಲ್ಲಿ ಗೌರವ ಹುಟ್ಟಿಸಬೇಕೇ ಹೊರತು ಭಯ ಹುಟ್ಟಿಸುವುದಲ್ಲ. ಈ ಬಗ್ಗೆ‌ ಆತ್ಮಾವಲೋಕನ‌ ಮಾಡಬೇಕಾದವರು ಭಯವನ್ನು ಉತ್ಪಾದಿಸುವವರೇ ಹೊರತು ಭಯ ಪಡುವವರಲ್ಲ. ಆರ್.ಎಸ್.ಎಸ್. ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? ಯಾಕೆ ಅಲ್ಲಿ ಹಿಂದುಗಳೇ ಆಗಿರುವ ದಲಿತ ಮತ್ತು ಹಿಂದುಳಿದ ಜಾತಿಗಳಿಲ್ಲ?‌ ಎನ್ನುವ ನನ್ನ ಸರಳ ಪ್ರಶ್ನೆಗೆ ಯಾಕೆ, ಯಾರೂ ಉತ್ತರಿಸುತ್ತಿಲ್ಲ? ಎಂದು ಸಿದ್ದರಾಮಯ್ಯ ಮತ್ತೆ ಕುಟುಕಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...