ಜಮ್ಮು ಕಾಶ್ಮೀರದಲ್ಲಿ ಎರಡು ದಿನಗಳ ಹಿಂದಷ್ಟೇ ಶಿಕ್ಷಕಿಯೊಬ್ಬರನ್ನು ಶಾಲೆಯಲ್ಲೇ ಗುಂಡಿಕ್ಕಿ ಹತ್ಯೆ ಮಾಡಿದ್ದ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಪ್ರಕರಣ ಮರುಕಳಿಸಿದೆ.
ಬ್ಯಾಂಕ್ ಮ್ಯಾನೇಜರ್ ಒಬ್ಬರ ಮೇಲೆ ಜಮ್ಮು ಕಾಶ್ಮೀರದ ಕುಲ್ಗಾಂವ್ ನಲ್ಲಿ ಉಗ್ರರು ಗುಂಡು ಹಾರಿಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಇದರ ಮಧ್ಯೆ ಜಮ್ಮು ಕಾಶ್ಮೀರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿಂದೂ ಸಮುದಾಯದವರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಗುಂಡೇಟಿನಿಂದ ಗಾಯಗೊಂಡಿರುವ ಬ್ಯಾಂಕ್ ಮ್ಯಾನೇಜರ್ ರಾಜಸ್ಥಾನದ ಹನುಮಾನ್ ಘಡ ನಿವಾಸಿ ಎನ್ನಲಾಗಿದೆ.