ಮಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿರುವ ಅರಣ್ಯಾಧಿಕಾರಿಗಳು ಐದು ಕೋಟಿ ರೂಪಾಯಿ ಮೌಲ್ಯದ ರಕ್ತಚಂದನ ಜಪ್ತಿ ಮಾಡಿದ್ದಾರೆ.
ಮಂಗಳೂರು ಹೊರವಲಯದ ಮುಲ್ಕಿ ಗ್ರಾಮದ ಕಿಲ್ಪಾಡಿ ಬಳಿ ರಕ್ತಚಂದನ ಜಪ್ತಿ ಮಾಡಲಾಗಿದೆ. ಲಾರಿಯಲ್ಲಿ ರಕ್ತಚಂದನ ಸಾಗಿಸುತ್ತಿದ್ದ 7 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಆಂಧ್ರಪ್ರದೇಶದ ನೋಂದಣಿಯ ಲಾರಿಯಲ್ಲಿ ಅಕ್ರಮವಾಗಿ ರಕ್ತಚಂದನ ಸಾಗಿಸಲಾಗುತ್ತಿತ್ತು. ತಮಿಳುನಾಡು ನೋಂದಣಿಯ ಕಾರ್ ನಲ್ಲಿ ಎಸ್ಕಾರ್ಟ್ ನೀಡಿ ರಕ್ತಚಂದನ ಸಾಗಿಸುತ್ತಿದ್ದರು. ಗೌಪ್ಯ ಮಾಹಿತಿಯನ್ನು ಸಂಗ್ರಹಿಸಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂಡಬಿದರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ದಾಳಿ ನಡೆಸಿ ರಕ್ತಚಂದನ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.