alex Certify ಹೀನಅಭಿರುಚಿ ವ್ಯಕ್ತಿಗೆ ಪಠ್ಯ ಪರಿಷ್ಕರಣೆ ಜವಾಬ್ದಾರಿ, ನಾಡಿಗೆ ಕೇಡಿನ ಲಕ್ಷಣ; ಶಿಕ್ಷಣ ಸಚಿವರಿಗೆ ಖಾರವಾಗಿ ಮತ್ತೆ ಪತ್ರ ಬರೆದ ದೇವನೂರ ಮಹಾದೇವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೀನಅಭಿರುಚಿ ವ್ಯಕ್ತಿಗೆ ಪಠ್ಯ ಪರಿಷ್ಕರಣೆ ಜವಾಬ್ದಾರಿ, ನಾಡಿಗೆ ಕೇಡಿನ ಲಕ್ಷಣ; ಶಿಕ್ಷಣ ಸಚಿವರಿಗೆ ಖಾರವಾಗಿ ಮತ್ತೆ ಪತ್ರ ಬರೆದ ದೇವನೂರ ಮಹಾದೇವ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಸಾಹಿತಿ, ಚಿಂತಕ ದೇವನೂರ ಮಹಾದೇವ ಅವರು ಮತ್ತೊಂದು ಪತ್ರ ಬರೆದಿದ್ದಾರೆ.

10ನೇ ತರಗತಿ ಪಠ್ಯ ಪುಸ್ತಕದಲ್ಲಿರುವ ನನ್ನ ಪಠ್ಯವನ್ನು ಕೈಬಿಡಬೇಕೆಂದು ವಿನಂತಿಸಿ ಮೇ 26 ರಂದು ಸಚಿವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಗೆ ಪತ್ರ ಬರೆಯಲಾಗಿತ್ತು. ಆ ಪತ್ರದಲ್ಲಿ ಪಠ್ಯವನ್ನು ಕೈಬಿಡುವಂತೆ ತಿಳಿಸಿದ್ದಲ್ಲದೇ, ಒಪ್ಪಿಗೆ ಇಲ್ಲದಿರುವುದಕ್ಕೆ ಸ್ಪಷ್ಟನೆ ನೀಡಲಾಗಿತ್ತು.

ಹೀಗಿದ್ದರೂ ಕೂಡ ದೇವನೂರು ಮಹಾದೇವ ಅವರ ಮನವಿ ಪರಿಗಣಿಸದೇ ಸಚಿವರು ಪರಿಷ್ಕೃತ ಮುದ್ರಣ ಜಾರಿಗೆ ಬರುತ್ತದೆ ಎಂದು ಹೇಳಿರುವುದಕ್ಕೆ ಸಚಿವರ ಧೋರಣೆ ದಬ್ಬಾಳಿಕೆ ಅನ್ನಿಸಿಬಿಟ್ಟಿತು ಎಂದು ದೇವನೂರ ಮಹಾದೇವ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಚತುರ್ವರ್ಣ ವಿರೋಧಿ ಬಸವಣ್ಣನವರ ಪಾಠವನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಕತ್ತು ಹಿಚುಕಿರುವುದು, ಕುವೆಂಪು, ಅಂಬೇಡ್ಕರ್ ಅವರನ್ನು ಗೇಲಿ ಮಾಡುವ ಮನಸ್ಥಿತಿಯ ವ್ಯಕ್ತಿಯನ್ನು ಪಠ್ಯ ಪರಿಷ್ಕರಣೆಗೆ ಅಧ್ಯಕ್ಷರನ್ನಾಗಿಸಲಾಗಿದೆ ಎಂದು ಟೀಕಿಸಿದ್ದಾರೆ.

ಒಂದು ಒಕ್ಕೂಟ ಸರ್ಕಾರದಲ್ಲಿ ಒಕ್ಕೂಟದ ಅಂಗವಾಗಿರುವ ಕರ್ನಾಟಕ ರಾಜ್ಯವು ತನಗೂ ಒಂದು ಧ್ವಜ ಬೇಕು ಎಂದು ಧ್ವನಿಯೆತ್ತಿದ ಸಂದರ್ಭದಲ್ಲಿ ಆ ಪರಿಕಲ್ಪನೆಯನ್ನು ತನ್ನ ಲಂಗೋಟಿಗೆ ಹೋಲಿಕೆ ಮಾಡಿದ ಹೀನಅಭಿರುಚಿಯ ವ್ಯಕ್ತಿಯನ್ನು ಮಕ್ಕಳ ಪಠ್ಯ ಪರಿಷ್ಕರಣೆ ಮಾಡಲು ಅಧ್ಯಕ್ಷರನ್ನಾಗಿಸುವುದು ಮತ್ತು ಸಮರ್ಥಿಸುವುದು, ಭಿನ್ನಾಭಿಪ್ರಾಯಗಳನ್ನು ಟೂಲ್ ಕಿಟ್ ಎಂದು ರಾಜಕೀಯಗೊಳಿಸಿ ಪರಾರಿಯಾಗಲು ನೋಡುವುದು, ಇವೆಲ್ಲಾ ಹಾಗೂ ನಾಡಿನ ಗಣ್ಯರು, ಮಠಾಧಿಪತಿಗಳು, ಲೇಖಕರು, ಪ್ರಜ್ಞಾವಂತರು ತಮ್ಮ ನೋವನ್ನು ವ್ಯಕ್ತಪಡಿಸಿ ಹಿಂದಿನ ಪಠ್ಯಪುಸ್ತಕವನ್ನು ಮುಂದುವರಿಸಿ ಎಂದು ಕೇಳಿಕೊಂಡರೂ ತಾವು ಅದನ್ನು ಕಾಲಕಸ ಮಾಡಿ ಲೆಕ್ಕಿಸದಿರುವುದನ್ನು ನೋಡಿದಾಗ ಇದು ನಾಡಿಗೆ ಕೇಡಿನ ಲಕ್ಷಣ ಎಂದೆನಿಸುತ್ತದೆ ಎಂದು ದೇವನೂರ ಮಹಾದೇವ ಪತ್ರದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...